ಸಿಎಂ ಜತೆ ಸಂವಾದ

0
248

 
ಬೆಂಗಳೂರು ಪ್ರತಿನಿಧಿ ವರದಿ
ಇಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಸಾರ್ವಜನಿಕರ ಜತೆ ಸಿಎಂ ಸಂವಾದ ನಡೆಸಲಿದ್ದಾರೆ.
 
 
ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜನಮನ ಕಾರ್ಯಕ್ರಮವಿದ್ದು. ಸಂಜೆ 4 ಗಂಟೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಜನಮನ ಸಂವಾದದಲ್ಲಿ ಆಯ್ದ 2 ಸಾವಿರ ಜನ ವೀಕ್ಷಕರು ಭಾಗವಹಿಸಲಿದ್ದಾರೆ.  ಈ ಸಂದರ್ಭದಲ್ಲಿ ಸಿಎಂ ಜತೆ ಸಂಪುಟದ ಎಲ್ಲ ಸಚಿವರು, ಉನ್ನತಾಧಿಕಾರಿಗಳು ಭಾಗಿಯಾಗಲಿದ್ದಾರೆ.
 
 
ಕೃಷಿ ಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಮನಸ್ವಿನಿ, ಮೈತ್ರಿ, ನಿರ್ಮಲ ಭಾಗ್ಯ, ಋಣಮುಕ್ತ ಯೋಜನೆಗಳ ಮೌಲ್ಯಮಾಪನ ನಡೆಯಲಿದೆ. ಜನರಿಂದಲೇ ಸರ್ಕಾರದ ಯೋಜನೆಗಳ ಬಗ್ಗೆ ಮೌಲ್ಯಮಾಪನ ನಡೆಯಲಿದೆ.

LEAVE A REPLY

Please enter your comment!
Please enter your name here