ಸಿಡಿಲಿಗೆ 46 ಬಲಿ

0
234

 
ರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರಭಾರತದ ಕೆಲ ರಾಜ್ಯಗಳಲ್ಲಿ ಮಳೆರಾಯನ ಅಬ್ಬರ ಹೆಚ್ಚಾಗಿದೆ. ಉತ್ತರಭಾರತದಲ್ಲಿ ಸಿಡಿಲು ಬಡಿದು ದುರ್ಮರಣ ಹೊಂದಿದವರ ಸಂಖ್ಯೆ 88ಕ್ಕೇರಿದೆ. ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.
 
 
 
ಬಿಹಾರ ರಾಜ್ಯ ಒಂದರಲ್ಲಿ ಸಿಡಿಲಿಗೆ 46 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ವಿವಿಧೆಡೆ ಸಿಡಿಲು ಬಡಿದು 13 ಮಕ್ಕಳು ಸೇರಿ 46 ಮಂದಿ ಸಾವನ್ನಪ್ಪಿದ್ದಾರೆ. ಸಿಡಿಲಿಗೆ ಬಲಿಯಾದವರ ಕುಟುಂಬಕ್ಕೆ ಸರ್ಕಾರ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
 
 
 
28ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯ ಹಲವೆಡೆ ಭಾರೀ ಮಳೆಗೆ ವಾಹನಗಳು ಮಳೆ ನೀರಿನಲ್ಲಿ ಮುಳುಗಿ ಹೋಗಿದೆ. ಗಾಳಿಗೆ ಮರಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
 
 
ಉತ್ತರಪ್ರದೇಶದಲ್ಲೂ ಸಿಡಿಲಿನ ಅಬ್ಬರಕ್ಕೆ ನಾಗರಿಕರು ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಉತ್ತರಪ್ರದೇಶದಲ್ಲಿ 42 ಜನ ಸಾವನ್ನಪ್ಪಿದ್ದಾರೆ. ಸಿಡಿಲಿನ ಅಬ್ಬರಕ್ಕೆ ಸಾವನ್ನಪ್ಪಿದ್ದವರ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

LEAVE A REPLY

Please enter your comment!
Please enter your name here