ಸಿಲಿಂಡರ್ ಸ್ಫೋಟ: ಮಹಿಳೆ ಸಾವು

0
440

ರಾಮನಗರ ಪ್ರತಿನಿಧಿ ವರದಿ
ಗ್ಯಾಸ್ ಸಿಲಿಂಡಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಸಾವನ್ನಪ್ಪಿದ್ದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ್ಣ ತಾಲೂಕಿನ ಬೇವೂರು ಗ್ರಾಮದಲ್ಲಿ ಸಂಭವಿಸಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸರೋಜಮ್ಮ ಎಂಬುವವರು ಸಾವನ್ನಪ್ಪಿದ್ದಾರೆ.
 
 
ಮತ್ತಿಬ್ಬರು ಮಹಿಳೆಯರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಬೇವೂರು ಗ್ರಾಮದಲ್ಲಿ ತಡರಾತ್ರಿ ಇಂದ್ರಮ್ಮ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಪಕ್ಕದ ಮನೆಯವರಾದ ಸರೋಜಮ್ಮ, ಲಿಂಗಮ್ಮಗೂ ಗಾಯಗಳಾಗಿವೆ. ಚಿಕಿತ್ಸೆಗೆಂದು ವಿಕ್ಟೋರಿಯಾ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಾಗಿದೆ. ಎಂ ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

LEAVE A REPLY

Please enter your comment!
Please enter your name here