ಸುಪ್ರೀಂಗೆ ಅರ್ಜಿ…

0
369

 
ನವದೆಹಲಿ ಪ್ರತಿನಿಧಿ ವರದಿ
ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿ ಕಾಪ್ಟರ್ ಖರೀದಿ ಹಗರಣ ಸಂಬಂಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.  ಕೇಸ್ ಸಂಬಂಧ ಮೂವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ.
 
 
ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್, ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಅಹ್ನದ್ ಪಟೇಲ್ ಈ ಮೂವರ ಹೆಸರೂ ಇಟಲಿ ತೀರ್ಪಿನಲ್ಲಿ ಉಲ್ಲೇಖವಾಗಿದೆ.
 
 
ಈ ಮೂವರ ವಿರುದ್ಧ ಶೀಘ್ರವೇ ಎಫ್ ಐಆರ್ ದಾಖಲಾಗಬೇಕು. ಈ ಕುರಿತು ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಮುಂದಿನ ವಾರ ಅರ್ಜಿ ವಿಚಾರಣೆ ನಡೆಸಲಿದೆ.
 
 
 
ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನೊಯಾ ಗಾಂಧಿ ಮತ್ತು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಪಾತ್ರವೂ ಇದೆ ಎಂದು ಇಟಲಿ ಕೋರ್ಟ್ ತೀರ್ಪು ನೀಡಿತ್ತು. ಇದರಿಂದ ಭಾರತದ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಠಿಸಿದೆ.

LEAVE A REPLY

Please enter your comment!
Please enter your name here