ಸುರಂಗ ಮಾರ್ಗಕ್ಕೆ ಗ್ರೀನ್ ಸಿಗ್ನಲ್

0
115

ಬೆಂಗಳೂರು ಪ್ರತಿನಿಧಿ ವರದಿ
ಶಿರಾಡಿಘಾಟ್‍ನಲ್ಲಿ 19 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಪರಿಸರ ಇಲಾಖೆಯ ಅನುಮತಿ ದೊರೆತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
 
ವಿಧಾನಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕೋಟಾ ಶ್ರೀನಿವಾಸಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿರಾಡಿಘಾಟ್‍ನಲ್ಲಿ ಮಳೆ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ 19 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಲು ಯೋಜನಾ ವರದಿ ರೂಪಿಸಿದ್ದು,ಸುರಂಗ ಮಾರ್ಗ ನಿರ್ಮಾಣಕ್ಕೆ ಪರಿಸರ ಇಲಾಖೆಯಿಂದ ಇದ್ದ ಅಡ್ಡಿ ನಿವಾರಣೆಯಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here