ಸೋಮಣ್ಣ ವಿರುದ್ಧ ಖಾಸಗಿ ದೂರು

0
308

ನಮ್ಮ ಪ್ರತಿನಿಧಿ ವರದಿ
ಮಾಜಿ ವಸತಿ ಸಚಿವ ವಿ ಸೋಮಣ್ಣ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಮತ್ತೊಮ್ಮೆ ಕೇಳಿ ಬಂದಿದೆ. ಈ ಕುರಿತಂತೆ ತನಿಖೆ ನಡೆಸಿ ಡಿಸೆಂಬರ್ 17ರೊಳಗೆ ವರದಿ ಸಲ್ಲಿಸುವಂತೆ ಎಸಿಬಿಗೆ ಲೋಕಾಯುಕ್ತ ಕೋರ್ಟ್ ಬುಧವಾರ ಆದೇಶಿಸಿದೆ.
 
 
ವಿ ಸೋಮಣ್ಣ ವಿರುದ್ಧ ಮೂಡಲಪಾಳ್ಯದ ರಾಮಕೃಷ್ಣ ಎಂಬುವರು ಲೋಕಾಯುಕ್ತ ಕೋರ್ಟಿನಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ. ಚುನಾವಣಾ ಆಯೋಗ ಹಾಗೂ ಲೋಕಾಯುಕ್ತಕ್ಕೆ ಈ ಹಿಂದೆ ಸಲ್ಲಿಸಲಾದ ಆಸ್ತಿ ವಿವರಕ್ಕೂ ಇಂದಿನ ಆಸ್ತಿ ವಿವರಕ್ಕೂ ಶೇ205 ರಷ್ಟು ಏರಿಕೆ ಕಂಡು ಬಂದಿದೆ ಎಂದು ಆರೋಪಿಸಲಾಗಿದೆ.

LEAVE A REPLY

Please enter your comment!
Please enter your name here