ಪ್ರಮುಖ ಸುದ್ದಿವಾರ್ತೆವಿದೇಶ

ಸ್ಮಾರ್ಟ್ ಸಿಟಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ವರದಿ: ಲೇಖಾ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಪ್ರಧಾನಿ ಮೋದಿ ಮಹಾರಾಷ್ಟ್ರದ ಪುಣೆಯಲ್ಲಿ ಅಧಿಕೃತವಾಗಿ ಭಾನುವಾರ ಚಾಲನೆ ನೀಡಿದ್ದಾರೆ.
 
 
ಪುಣೆಯ ಛತ್ರಪತಿ ಶಿವಾಜಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ 69 ಸ್ಮಾರ್ಟ್ ಸಿಟಿಗಳ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು. ಒಟ್ಟು 1770 ಕೋಟಿ ಸ್ಮಾರ್ಟ್ ಸಿಟಿ ಯೋಜನೆಗೆ ಚಾಲನೆ ನೀಡಿದರು.
 
 
 
ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು, ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಜತೆಗೆ ಮಹಾರಾಷ್ಟ್ರ ರಾಜ್ಯಪಾಲ ಸಿ. ವಿದ್ಯಾಸಾಗರ ರಾವ್ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ 20 ಪ್ರಮುಖ ನಗರಗಳಿಗೆ ನೇರ ಸಂಪರ್ಕ ಕಲ್ಪಿಸಲಾಗಿತ್ತು. ಆಂಧ್ರ ಪ್ರದೇಶ, ಓಡಿಶಾ, ರಾಜಸ್ಥಾನ ರಾಜ್ಯಗಳು ಸಮಾರಂಭದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಭಾಗಿಯಾಗಿದ್ದವು.
 
 
 
ಭಾತರದ ಜನ ಸ್ಮಾರ್ಟ್ ಆಗಿದ್ದು, ಅವರ ಸಾಮರ್ಥ್ಯ ಜಗತ್ತಿಗೆ ಬಿಂಬಿಸಲು ಸ್ಮಾರ್ಟ್ ಸಿಟಿ ಯೋಜನೆ ನೆರವಾಗಲಿದೆ. ಅಭಿವೃದ್ಧಿ ಪಥದಲ್ಲಿ ಜನರ ಸಹಭಾಗಿತ್ವ ಮುಖ್ಯ, ಇದರಿಂದ ನಗರಗಳ ಧನಾತ್ಮಕ ವಾತಾವರಣ ಸೃಷ್ಟಿಗೆ ನೆರವಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.
 
 
 
ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಮಾತನಾಡುತ್ತ ಜನರಲ್ಲಿ ಒಂದೇ ದೇಶ ಎಂಬ ಒಮ್ಮತದ ತೀರ್ಮಾನ ಮೂಡಿದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಯಶಸ್ವಿಯಾಗುವುದು ಎಂದರು. ಸ್ಮಾರ್ಟ್ ನೆಟ್ ಪೋರ್ಟಲ್​ನ್ನು ಈ ಸಂದರ್ಭದಲ್ಲಿ ಉದ್ಘಾಟಿಸಿದ ಮೋದಿ ಸ್ಮಾರ್ಟ್ ಸಿಟಿ ಯೋಜನೆಗೆ ಉಪಯುಕ್ತ ಮಾಹಿತಿಗಳನ್ನು ಈ ಪೋರ್ಟಲ್​ನಲ್ಲಿ ಹಂಚಿಕೊಳ್ಳಬಹುದಾಗಿದೆ ಎಂದರು.
 
 
ಸ್ಮಾರ್ಟ್ ಸಿಟಿ ಮಿಷನ್, ಅಮೃತ್ ಮಿಷನ್ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗಳಿಗೆ ಇದೇ ಕಾರ್ಯಕ್ರಮದಲ್ಲಿ ಮೋದಿ ಚಾಲನೆ ನೀಡಿದರು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here