ಸ್ವಾಮೀಜಿ ಡಿಸ್ಚಾರ್ಜ್

0
324

 
 
ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಿಂದ ನಡೆದಾಡುವ ದೇವರು ಎಂದೇ ಪ್ರಸಿದ್ಧಿಯಾಗಿರುವ ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ್ ಸ್ವಾಮೀಜಿಗಳು ಡಿಸ್ಚಾರ್ಜ್ ಆಗಿದ್ದಾರೆ.
 
 
 
ಬೆಂಗಳೂರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಿಂದ ಸಿದ್ಧಗಂಗಾ ಮಠದತ್ತ ಪೊಲೀಸರ ಭದ್ರತೆಯಲ್ಲಿ ಸ್ವಾಮೀಜಿ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದಲ್ಲಿ ಸ್ವಾಮೀಜಿ ದರ್ಶನ ಪಡೆಯಲು ಭಕ್ತರ ನೂಕುನುಗ್ಗಲು ಉಂಟಾಗುತ್ತು. ಭಕ್ತರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
 
 
ಜ್ವರ-ಕಫ ಆಯಾಸದಿಂದ ಬಳಲುತ್ತಿದ್ದ ಶ್ರೀಗಳನ್ನು ನಿನ್ನೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಡಾ.ಶಿವಕುಮಾರ್ ಸ್ವಾಮೀಜಿ ಪಿತ್ತನಾಳದಲ್ಲಿ ಬ್ಲಾಕೇಜ್ ನ್ನು ಎಂಡೋಸ್ಕೋಪಿ ಮೂಲಕ ತೆರವು ಮಾಡಲಾಗಿದೆ. ಇಂದು ಮುಂಜಾನೆ ಶ್ರೀಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಸಂಜೆ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

LEAVE A REPLY

Please enter your comment!
Please enter your name here