ಸ್ವ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳ ಆಗರ

0
145

 
ಉಜಿರೆ ಪ್ರತಿನಿಧಿ ವರದಿ
ಇನ್ನೊಬ್ಬರ ಕೈಕೆಳಗೆ ದುಡಿಯುವುದಕ್ಕಿಂತ ಸ್ವಂತ ಉದ್ಯೋಗ ಮಾಡಿ ಇತರರಿಗೆ ಉದ್ಯೋಗ ನೀಡುವ ಮೂಲಕ ನಾವು ದೇಶದ ಅಭಿವೃದ್ಧಿಗೆ ಕಾಣಿಕೆ ನೀಡಬಹುದು. ನಮ್ಮ ಆಸಕ್ತಿ ಹಾಗೂ ಕೌಶಲಗಳನ್ನು ಗುರುತಿಸಿಕೊಂಡು ಬೆಳೆಯಲು ಸ್ವ ಉದ್ಯೋಗ ಕ್ಷೇತ್ರ ವಿಪುಲ ಅವಕಾಶಗಳನ್ನು ನೀಡುತ್ತದೆ ಎಂದು ಉಜಿರೆಯ ರುಡ್ ಸೆಟ್ ಸಂಸ್ಥೆಯ ಪ್ರಾಧ್ಯಾಪಕ ಜೇಮ್ಸ್ ಅಬ್ರಹಾಂ ಅವರು ತಿಳಿಸಿದರು.
 
ಜೇಮ್ಸ್ ಅಬ್ರಹಾಂ ಅವರು ಉಜಿರೆಯ ಶ್ರೀ. ಧ.ಮಂ ಕಾಲೇಜಿನ ಅರ್ಥಶಾಸ್ತ್ರ ಸಂಘವು ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. ತಮ್ಮ ಪ್ರತಿಭೆಯನ್ನು ಗುರುತಿಸಿ ಬೆಳೆಸಿಕೊಳ್ಳಲು ರುಡ್ ಸೆಟ್ ಅವಕಾಶವನ್ನು ನೀಡುತ್ತದೆ ಎಂದು ತಿಳಿಸಿದರು.
 
ಸಭೆಯ ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎ.ಜಯ ಕುಮಾರ ಶೆಟ್ಟಿ ಮಾತನಾಡುತ್ತಾ ಪದವಿ ಮುಗಿದ ಬಳಿಕ ಮುಂದೇನು ಎಂದು ಚಿಂತಿಸುವ ಬದಲು, ವಿದ್ಯಾರ್ಥಿ ದೆಸೆಯಲ್ಲಿಯೇ ಸ್ವ ಉದ್ಯೋಗ ಅವಕಾಶಗಳ ಬಗ್ಗೆ ತಿಳಿದುಕೊಂಡು ತಮ್ಮ ಕಾಲೇಜು ಶಿಕ್ಷಣದ ಸಮಯದಲ್ಲಿ ಅಗತ್ಯ ಸಾಮರ್ಥ್ಯವನ್ನು ಹೆಚ್ಚಿಸಲು ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಗಣರಾಜ್, ವಸಂತಿ ಹಾಗೂ ಉಜಿರೆ ಜೇಸೀ ಅಧ್ಯಕ್ಷ ಮಹೇಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಯೋಜಕಿಯಾದ ಕು.ಅಭಿಜ್ಞಾ ಸ್ವಾಗತಿಸಿ, ಕಾರ್ತಿಕೇಯ ವಂದಿಸಿದರು.

LEAVE A REPLY

Please enter your comment!
Please enter your name here