ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

0
238

ಬೆಂಗಳೂರು ಪ್ರತಿನಿಧಿ ವರದಿ
ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ರುದ್ರೇಶ್ ಹತ್ಯೆಯನ್ನು ಖಂಡಿಸಿ ಬಿಜಿಪಿ ಇಂದು ಪ್ರತಿಭಟನೆ ನಡೆಸುತ್ತಿದೆ.ಈ ಹಿನ್ನೆಲೆಯಲ್ಲಿ 4 ಸ್ಟೇಷನ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
 
 
ಪ್ರತಿಭಟನೆ ವೇಳೆ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳ ಹುಡುಗಾಟ ಆರಂಭಿಸಿದೆ.
 
ಆರ್ ಎಸ್ ಎಸ್ ಕಾರ್ಯಕರ್ತರ ಪ್ರತಿಭಟನೆ
ಶಿವಾಜಿನಗರದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದಂಡುಮಾರಮ್ಮ ವೃತ್ತದಲ್ಲಿ ಪ್ರತಿಭನಾಕಾರರು ಜಮಾವಣೆಯಾಗಿದೆ. ಕೊಲೆ ಆರೋಪಿಗಳನ್ನು ಬಂಧಿಸದಿರೋದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರು ವಿವಿಧೆಡೆ ಮೆರವಣಿಗೆ ನಡೆಸಲಿದ್ದಾರೆ.
 
ಪ್ರತಿಭಟನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಭದ್ರತೆಗೆ ಮಾರ್ಕ್ಸ್ ಮ್ಯಾನ್, ವಜ್ರ, ವಾಟರ್ ಜೆಟ್ ಬಳಕೆ ಮಾಡಲಾಗಿದೆ. ಆರ್ ಎಎಫ್, ಕೆ ಎಸ್ ಆರ್ ಪಿ, ಸಿವಿಲ್ ಪೊಲೀಸರು ಮತ್ತು 500 ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
 
ಬೆಂಗಳೂರಿನ ಶಿವಾಜಿನಗರಗ ಕಮರ್ಷಿಯಲ್ ಸ್ಟ್ರೀಟ್ ನ ಕಾಮರಾಜ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ಹಾಡಹಗಲೇ ರುದ್ರೇಶ್ ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾರೆ. ಮೃತ ರುದ್ರೇಶ್ ಆರ್ ಎಸ್ ಎಸ್ ಕಾರ್ಯಕರ್ತನಾಗಿದ್ದು, ನಿನ್ನೆ ಬೆಳಗ್ಗೆ ಪಥಸಂಚಲನ ಮುಗಿಸಿ ವಾಪಸಾಗುತ್ತಿದ್ದರು. ಈ ವೇಳೆ ನುಗ್ಗಿದ ದುಷ್ಕರ್ಮಿಗಳ ತಂಡ ರುದ್ರೇಶ್ ಮೇಲೆ ಹಲ್ಲೆ ಮಾಡಿ ಕೊಲೆಗೈದಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here