ಹಳಿ ತಪ್ಪಿದ ಗೂಡ್ಸ್ ರೈಲು

0
240

ಹಾಸನ ಪ್ರತಿನಿಧಿ ವರದಿ
ಹಾಸನದಲ್ಲಿ ಗೂಡ್ಸ್ ರೈಲೊಂದು ಹಳಿ ತಪ್ಪಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಬಾಗಿಲು ಬಳಿ ರೈಲು ಹಳಿ ತಪ್ಪಿದೆ. ರಾಷ್ಟ್ರೀಯ ಹೆದ್ದಾರಿ 79ರಲ್ಲಿ ಗೂಡ್ಸ್ ರೈಲಿನ ಒಂದು ಭಾಗ ಹಳಿತಪ್ಪಿದೆ.
 
 
 
ಇದರಿಂದ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ನೂರಾರು ಪ್ರಯಾಣಿಕರು ಪರದಾಟ ನಡೆಸಿದ್ದಾರೆ.
 
 
ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ರೈಲು ಬಾಳ್ಳುಪೇಟೆ ಮಧ್ಯೆ ನಿಂತಿದೆ. ಘಟನಾ ಸ್ಥಳಕ್ಕೆ ರೇಲ್ವೆ ಅಧಿಕಾರಿಗಳು ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here