ಆರೋಗ್ಯವಾರ್ತೆ

ಹಳ್ಳಿಮದ್ದು: ಹಾಗಲಕಾಯಿ

ಆರೋಗ್ಯ ವಾರ್ತೆ:
ಹಾಗಲಕಾಯಿಯನ್ನು ಇಂಗ್ಲೀಷ್ ನಲ್ಲಿ ಬಿಟರ್ ಮೆಲನ್ ಅಥವಾ ಬಿಟರ್ ಗಾರ್ಡ್ ಎನ್ನುತ್ತಾರೆ. ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ, ಆಫ್ರಿಕಾ  ಹಾಗೂ ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣುಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ.
 
 
ಇದು ಔಷಧೀಯ ಮೂಲವಾಗಿದೆ. ಬಹಳ ಹಿಂದಿನಿಂದಲೂ ಹಾಗಲಕಾಯಿಯನ್ನು ಹಲವಾರು ಸಾಂಪ್ರದಾಯಿಕ ಔಷಧೀಯ ಪದ್ಧತಿಗಳಲ್ಲಿ ಬಳಸಲಾಗುತ್ತದೆ. 

  • ಹಾಗಲಕಾಯಿಯ ನಿಯಮಿತ ಬಳಕೆಯಿಂದ ದೃಷ್ಠಿದೋಷ ನಿವಾರಣೆಯಾಗುತ್ತದೆ.
  • ಹಾಗಲಕಾಯಿಯು ಆಹಾರ ಪಚನಶಕ್ತಿಯನ್ನು ಚುರುಕುಗೊಳಿಸುತ್ತದೆಂದು ಹೇಳಲಾಗುತ್ತದೆ
  • ಹಾಗಲಕಾಯಿಯನ್ನು, ಜಠರಗರುಳಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಟೊಗೊನಲ್ಲಿ ಜನಪದೀಯ ಔಷಧವನ್ನಾಗಿ ಬಳಸಲಾಗುತ್ತದೆ. ಹಾಗು ಇದರ ರಸವು, ನೇಮಟೋಡ್ ವರ್ಗದ ಲಾಡಿಯಂತಹ ಹುಳು ಕಯೇನೋರ್ಹಬ್ಡಿಟಿಸ್ ಎಲೆಗನ್ಸ್ವಿರುದ್ಧ ವಿಟ್ರೋನಲ್ಲಿ ಚುರುಕುಗೊಂಡಿರುವುದು ಕಂಡುಬಂದಿದೆ.
  •  ಹಾಗಲಕಾಯಿಯು ಮಲೇರಿಯಾ ರೋಗವನ್ನು ತಡೆಗಟ್ಟುವಲ್ಲಿ ಹಾಗು ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ಸಹಕಾರಿಯಾಗಿದೆಯೆಂದು  ಏಷಿಯಾದಲ್ಲಿ ಸಾಂಪ್ರದಾಯಿಕವಾಗಿ ಪರಿಗಣಿಸಲಾಗುತ್ತದೆ.
  • ಹಾಗಲಕಾಯಿಯು ಡಯಾಬಿಟಿಸ್ ಮೆಲ್ಲಿಟಸ್ ಟೈಪ್ 2ನ್ನು ತಡೆಗಟ್ಟಲು ಅಥವಾ ಅದನ್ನು ನಿಷ್ಫಲಗೊಳಿಸಲು ಸಹಾಯಕವಾಗಿದೆಯೆಂದು ಜನಪದೀಯ ಚಿಕಿತ್ಸಾ ವಿಧಾನದ ಜ್ಞಾನವು ಸೂಚಿಸುತ್ತದೆ.  ಪನಾಮಾದ ಸಾಂಪ್ರದಾಯಿಕ ಔಷಧ ಪದ್ಧತಿಯಲ್ಲಿ, ಈ ಉದ್ದೇಶಕ್ಕಾಗಿ ಎಲೆಗಳಿಂದ ತಯಾರಿಸಲಾದ ಟೀಯನ್ನು ಬಳಸಲಾಗುತ್ತದೆ.
  • ಹಾಗಲಕಾಯಿಯನ್ನು ಭೇದಿ, ಉದರಶೂಲೆ, ಜ್ವರಗಳು, ಸುಟ್ಟಗಾಯಗಳು, ನೋವಿನಿಂದ ಕೂಡಿದ ರಜಃಸ್ರಾವ, ತುರಿಗಜ್ಜಿ ಹಾಗು ಚರ್ಮದ ಇತರ ಸಮಸ್ಯೆಗಳನ್ನು ಒಳಗೊಂಡಂತೆ ಹಲವಾರು ಇತರ ಅಸ್ವಸ್ಥತೆಗಳಿಗಾಗಿ ಸಾಂಪ್ರದಾಯಿಕ ಔಷಧಪದ್ಧತಿಯಲ್ಲಿ ಬಳಸಲಾಗುತ್ತದೆ. ಇದನ್ನು ಸಂತಾನ ನಿಯಂತ್ರಣದಲ್ಲಿ ಗರ್ಭಸ್ರಾವಕವಾಗಿ, ಹಾಗು ಶಿಶುವಿನ ಜನನಕ್ಕೆ ಸಹಕಾರಿಯಾಗಲು ಸಹ ಬಳಸಲಾಗುತ್ತದೆ.
  • ಹಾಗಲಕಾಯಿ ಕ್ಯಾನ್ಸರ್ ನಿಂದ ಕಾಪಾಡುತ್ತದೆ.
  • ರಕ್ತವನ್ನು ಶುದ್ಧೀಕರಿಸುತ್ತದೆ. ದೇಹದ ತೂಕವನ್ನು ಸಮತೋಲನದಲ್ಲಿಡುತ್ತದೆ.
  • ಊಟಕ್ಕೆ ಮುನ್ನ ಹಾಗಲಕಾಯಿಯನ್ನು ತಿಂದರೆ ಆಹಾರ ಬೇಗನೇ ಜೀರ್ಣವಾಗುತ್ತದೆ.
  • ಹಾಗಲಕಾಯಿಯ ರಸವನ್ನು ಮೊಡವೆಗಳ ಮೇಲೆ ಹಚ್ಚುವುದರಿಂದ ಮೊಡವೆಗಳು ಮಾಯವಾಗುತ್ತದೆ.
  • ಮೂಲವ್ಯಾಧಿ ಉರಿಗೆ ಹಾಗಲಕಾಯಿ ರಸವನ್ನು ಹಸುವಿನ ಮಜ್ಜಿಗೆಯಲ್ಲಿ ಬೆರೆಸಿ ಸೇವಿಸಿದರೆ ಉರಿ ಶಮನವಾಗುತ್ತದೆ.
  • ಹಾಗಲಕಾಯಿ ಸೇವಿಸುವುದರಿಂದ ರಕ್ತಶುದ್ಧಿಯಾಗುತ್ತದೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here