ಹಾಡಹಗಲೇ ಬರ್ಬರ ಕೊಲೆ

0
466

ಮೈಸೂರು ಪ್ರತಿನಿಧಿ ವರದಿ
ಹಳೆದ್ವೇಷ ಹಿನ್ನೆಲೆಯಲ್ಲಿ ಹಾಡಹಗಲೇ ವ್ಯಕ್ತಿಯ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ನಗರ ವಿವಿ ಮೊಹಲ್ಲಾದದಲ್ಲಿ ನಡೆದಿದೆ. ಪಡುವಾರಹಳ್ಳಿಯ ನಿವಾಸಿ ಕೃಷ್ಣ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು.
 
 
ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಎಂಬುವವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
 
 
 
ಮೃತ ಕೃಷ್ಣ ನಗರ ಪಾಲಿಕೆ ಮಾಜಿ ಸದಸ್ಯ ಮಾದೇಶ್ ಸ್ನೇಹಿತನಾಗಿದ್ದ. ಮಾದೇಶ್, ಜೋಡಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ರೌಡಿಶೀಟರ್ ದೇವು ಕೊಲೆಗೆ ಪ್ರತೀಕಾರವಾಗಿ ಕೃಷ್ಣನನ್ನು ಮಾರಣಾಂತಿಕವಾಗಿ ಹಲ್ಲೆಗೈದು ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ. ರೌಡಿಶೀಟರ್ ದೇವು ಕೆಲ ತಿಂಗಳ ಹಿಂದೆ ಕೊಲೆಯಾಗಿದ್ದ. ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here