ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

0
329

 
ಮ0ಗಳೂರು ಪ್ರತಿನಿಧಿ ವರದಿ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2016-17ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
 
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ- ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1. ಲಕ್ಷ. ಹಾಸ್ಟೆಲ್ ಪ್ರವೇಶ ಬಯಸುವವರು ವೆಬ್ ಸೈಟ್ www.backwardclasses.kar.nic.in ಜುಲೈ 23ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.
 
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ ಸಂಪರ್ಕಿಸಲು ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here