ಹಿಂದುಳಿದ ವರ್ಗಗಳ ಏಳ್ಗೆ ಬಿಜೆಪಿ ಯಿಂದ ಮಾತ್ರ ಸಾಧ್ಯ-ಬೇಲೂರು ಲಕ್ಷ್ಮಣ್

0
261

 
ಮಂಗಳೂರು ಪ್ರತಿನಿಧಿ ವರದಿ
ರಾಜ್ಯದಲ್ಲಿ ಅಹಿಂದ ಹೆಸರಲ್ಲಿ ಅಧಿಕಾರ ಹಿಡಿದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗಗಳನ್ನು ಸಂಪೂರ್ಣ ಕಡೆಗಣಿಸಿರುತ್ತಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರಕಾರವನ್ನು ಅಧಿಕಾರಕ್ಕೆ ತರಲು ಇಂದಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬೇಲೂರು ಲಕ್ಷ್ಮಣ ಕರೆ ನೀಡಿದರು.
 
 
 
ಅವರು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಬುಧವಾರ ನಡೆದ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಭೆಯಲ್ಲಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರುಗಳಾದ ಶಿವಕುಮಾರ್, ಕಿರಣ್ ಕುಮಾರ್ ಉಡುಪಿ, ರಾಜ್ಯ ಕಾರ್ಯದರ್ಶಿಗಳಾದ ಸತ್ಯಜಿತ್ ಸುರತ್ಕಲ್, ರವಿಚಂದ್ರ ಮಂಗಳೂರು, ದ.ಕ.ಜಿಲ್ಲಾ ಅಧ್ಯಕ್ಷರಾದ ಸಂಜೀವ ಮಠಂದೂರು, ಪ್ರಧಾನ ಕಾರ್ಯದರ್ಶಿ ಕ್ಯಾ|ಬ್ರಿಜೇಶ್ ಚೌಟ, ಹಿಂದುಳಿದ ವರ್ಗಗಳ ಮೋರ್ಚಾದ ದ.ಕ.ಜಿಲ್ಲಾಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಉಡುಪಿ ಜಿಲ್ಲಾಧ್ಯಕ್ಷರಾದ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.
 
 
ಮೋರ್ಚಾದ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ವಿನೋದ್ ಎಸ್.ಸಾಲ್ಯಾನ್ ವಂದಿಸಿದರು.

LEAVE A REPLY

Please enter your comment!
Please enter your name here