ಹಿಂಸಾರೂಪಕ್ಕೆ ತಿರುಗಿದ ಮಹದಾಯಿ ಹೋರಾಟ

0
265

 
ಗದಗ ಪ್ರತಿನಿಧಿ ವರದಿ
ಮಹದಾಯಿ ನ್ಯಾಯಾಧೀಕರಣ ತೀರ್ಪಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದರಿಂದ ಗದಗದ ನರಗುಂದ ಪಟ್ಟಣದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ನವಲಗುಂದದಲ್ಲಿ ಸರ್ಕಾರಿ ಕಚೇರಿಗಳಿಗೆ ಪ್ರತಿಭಟನಾನಿರತರು ಬೆಂಕಿ ಹಚ್ಚಿದ್ದಾರೆ.
 
 
 
ಗುರುವಾರ ಬೆಳಗ್ಗೆಯಿಂದ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಧ್ಯಾಹ್ನ ಹಿಂಸಾರೂಪಕ್ಕೆ ತಿರುಗಿದೆ. ಪುರಸಭೆ ಕಚೇರಿಯ ಕಡತಗಳ ವಿಭಾಗ ಮತ್ತು ನವಲಗುಂದ ಬಿಎಸ್‌ಎನ್‌ಎಲ್‌ ಕಚೇರಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿದೆ.
 
 
 
ಗದಗದ ನರಗುಂದ ಪಟ್ಟಣದಲ್ಲಿ ಇಬ್ಬರು ವಿದ್ಯಾರ್ಥಿಗಳು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂದೀಶ್ ಚನ್ನಬಸಪ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆತರಲಾಗಿದ್ದು, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರು ಆಸ್ಪತ್ರೆ ಮುಂಭಾಗಕ್ಕೆ ಬಂದು ಜಮಾಯಿಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
 
 
 
ಕೋರ್ಟ್‌ ಹಾಲ್‌ಗೆ ನುಗ್ಗಿದ ಪ್ರತಿಭಟನಾನಿರತರು ಪಿಠೋಪಕರಣಗಳನ್ನು ಧ್ವಂಸಗೊಳಿಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಧಾರವಾಡದಿಂದ ಆರ್‌ಎಎಫ್‌ಪಡೆಯನ್ನು ನವಲಗುಂದಕ್ಕೆ ಕಳುಹಿಸಲಾಗಿದೆ.

LEAVE A REPLY

Please enter your comment!
Please enter your name here