ಹಿರಿಯ ಸಾಹಿತಿ ದೇಜಗೌ ಇನ್ನಿಲ್ಲ

0
374

 
ಮೈಸೂರು ಪ್ರತಿನಿಧಿ ವರದಿ
ಕನ್ನಡದ ಖ್ಯಾತ ಹಿರಿಯ ಸಾಹಿತಿ ನಾಡೋಜ ದೇ.ಜವರೇಗೌಡ(98) ಅವರು ಸೋಮವಾರ ಸಂಜೆ ನಗರದ ಜಯದೇವ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
 
ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ದೇಜಗೌ ಅವರನ್ನು ಇತ್ತೀಚಿಗೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
 
 
ದೇ.ಜ.ಗೌ ಎಂದು ಖ್ಯಾತಿಯಾಗಿದ್ದ ದೇ.ಜವರೇಗೌಡ ಅವರು ಕನ್ನಡದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾಗಿದ್ದು, ಹಲವು ಕೃತಿಗಳನ್ನು ಬರೆದಿದ್ದಾರೆ. ಅವರ ಸಾಹಿತ್ಯ ಕೃತಿಗಳು ಹಲವು ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿದ್ದಾರೆ. 1918ರ ಜುಲೈ ೮ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕರೆಯಲ್ಲಿ ದೇವೇಗೌಡ-ಚನ್ನಮ್ಮ ದಂಪತಿಗಳ ಮಗನಾಗಿ ಹುಟ್ಟಿದರು.
 
 
ರಾಷ್ಟ್ರಕವಿ ಕುವೆಂಪು ಅವರಿಂದ ಪ್ರಭಾವಿತರಾಗಿ,ಮೈಸೂರಿನಲ್ಲಿ ಕನ್ನಡ ಎಂ.ಎ. ಪದವಿ ಪಡೆದರು. 1946ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ, ಕನ್ನಡ ಅಧ್ಯಾಪಕರಾದರು. ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಸೇರಿದಂತೆ ಅನೇಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ದೇಜಗೌ ನಿರ್ವಹಿಸಿದ್ದಾರೆ.
 
 
ಇಂದು ಅಂತ್ಯಕ್ರಿಯೆ
ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ಮಧ್ಯಾಹ್ನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ ದೇಜಗೌ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲಿದ್ದಾರೆ.

LEAVE A REPLY

Please enter your comment!
Please enter your name here