ಹೆಲಿಕಾಪ್ಟರ್ ಪತನ

0
272

ರಾಷ್ಟ್ರೀಯ ಪ್ರತಿನಿಧಿ ವರದಿ
ಫಿಶ್ ತೈಲ್ ಏರ್ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಮಗು ಸೇರಿ 7 ಪ್ರಯಾಣಿಕರು ದಾರುಣ ಸಾವನ್ನಪ್ಪಿದ್ದ ಘಟನೆ ನೇಪಾಳದ ಕಾಠ್ಮಂಡು ಬಳಿ ಸೋಮವಾರ ಸಂಭವಿಸಿದೆ.
 
 
5 ದಿನದ ಮಗುವಿಗೆ ಚಿಕಿತ್ಸೆ ಕೊಡಿಸಲು ಪೋಷಕರು ಹೆಲಿಕಾಪ್ಟರ್ ನಲ್ಲಿ ಕರೆದೊಯ್ಯುತ್ತಿದ್ದಾಗ ಸುಮಾರು ಮಧ್ಯಾಹ್ನ 1 ಗಂಟೆಗೆ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಲಿಕಾಪ್ಟರ್ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಪರ್ಕ ಕಡಿತಗೊಂಡಿತ್ತು. ಹೆಲಿಕಾಪ್ಟರ್ ಪತನದ ನಂತರ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಅಲ್ಲಿನ ಗ್ರಾಮಸ್ಥರು ನೀಡಿದ ಸೂಚನೆ ಮೇರೆಗೆ ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳಿದಾಗ 7 ಮೃತದೇಹಗಳು ಪತ್ತೆಯಾಗಿವೆ.

LEAVE A REPLY

Please enter your comment!
Please enter your name here