ಹೈಆಲರ್ಟ್ ನಲ್ಲಿ ನ್ಯೂಇಯರ್

0
341

ಬೆಂಗಳೂರು ಪ್ರತಿನಿಧಿ ವರದಿ
ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು ಸಿದ್ಧವಾಗಿದೆ. ಆಚರಣೆ ಜತೆಗೆ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬ್ರಿಗೇಡ್ ರೋಡ್, ಎಂ ಜಿ ರೋಡ್ ನಲ್ಲಿ ಹೈ ಅಲರ್ಟ್ ಮಾಡಲಾಗಿದೆ.
 
 
 
ಪ್ರಮುಖ ರಸ್ತೆಗಳಲ್ಲಿ ಸಿಸಿ ಕ್ಯಾಮಾರಾಗಳನ್ನು ಅಳವಡಿಕೆ ಮಾಡಲಾಗಿದೆ. ಬಾಂಬ್ ಸ್ಕ್ರಾಡ್, ಡಾಗ್ ಸ್ಕ್ರಾಡ್ ಸಿಬ್ಬಂದಿಯಿಂದ ಪರಿಶೀಲನೆ ನಡೆಸಲಾಗಿದೆ. ಎಂ ಜಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ನಲ್ಲಿ ಪರಿಶೀಲನೆ ನಡೆಸಲಾಗಿದೆ. ಬ್ರಿಗೇಡ್ ರೋಡ್ ಗೆ ಡಿಸಿಪಿ ಸಂದೀಪ್ ಪಾಟೀಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
 
 
 
ಭದ್ರತೆಗಾಘಿ 10 ಎಸಿಪಿ, 24 ಇನ್ ಸ್ಟೆಕ್ಟರ್, 64 ಪಿಎಸ್ ಐ, 600ಕ್ಕೂ ಹೆಚ್ಚು ಪೊಲೀಸ್ ಪೇದೆಗಳನ್ನು ನೊಯೋಜನೆ ಮಾಡಲಾಗಿದೆ. ಮುನ್ನೆಚ್ಚರಿಕೆಯಿಂದ 10 ವಾಚ್ ಟವರ್ ಗಳನ್ನು ಅಳವಡಿಸಲಾಗಿದೆ ಎಂದು ಕೇಂದ್ರ ವಲಯ ಡಿಸಿಪಿ ಸಂದೀಪ್ ಪಾಟೀಲ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here