ಹೈಕೋರ್ಟ್ ನಿಂದ ನೋಟಿಸ್ ಜಾರಿ

0
309

 
ರಾಷ್ಟ್ರೀಯ ಪ್ರತಿನಿಧಿ ವರದಿ
ಶನಿಸಿಂಗಣಾಪುರ ದೇಗುಲಕ್ಕೆ ಮಹಿಳೆಯರಿಗೆ ನಿಷೇಧ ವಿಚಾರದಲ್ಲಿ ದೇಗುಲಕ್ಕೆ ಪ್ರವೇಶಿಸುವ ಮಹಿಳೆಯರಿಗೆ ಭದ್ರತೆ ಒದಗಿಸಿ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದೆ.
ದೇಗುಲ ಪ್ರವೇಶಕ್ಕೆ ಮಹಿಳೆಯರನ್ನು ನಿಷೇಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಆದರೆ ಮಹಿಳೆಯರಿಗೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಈ ಬಗ್ಗೆ ಮಹಾರಾಷ್ಟ್ರ ಸರ್ಕಾರಕ್ಕೆ ಕೋರ್ಟ್ ನೋಟಿಸ್ ಕೂಡ ಜಾರಿ ಮಾಡಿದೆ.
 
ಇತ್ತೀಚೆಗೆ 400 ವರ್ಷಗಳಿಗೂ ಹಿಂದಿನ ಸಂಪ್ರದಾಯ ಮುರಿದು ಶನಿ ದೇಗುಲದ ಗರ್ಭಗುಡಿ ಮತ್ತು ಬಲಿ ಪೀಠಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದ 350 ಮಹಿಳೆಯರ ಯತ್ನಕ್ಕೆ ಪೊಲೀಸರು ತಡೆ ಹಾಕಿದ್ದಾರೆ.

LEAVE A REPLY

Please enter your comment!
Please enter your name here