ಹೈ'ಗೆ 'ಸುಪ್ರೀಂ' ತಡೆ

0
448

 
ರಾಷ್ಟ್ರೀಯ ಪ್ರತಿನಿಧಿ ವರದಿ
ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ವಜಾ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
 
 
ಉತ್ತರಾಖಂಡ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೈನಿತಾಲ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಏ.27ಕ್ಕೆ ಮುಂದೂಡಿದೆ. ತಡೆ ಆದೇಶದ ಪ್ರತಿ ಸಲ್ಲಿಸುವಂತೆ ನೈನಿತಾಲ್ ಹೈಕೋರ್ಟ್ ಗೆ ಸೂಚನೆ ನೀಡಿದೆ.
 
 
 
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು, ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸುವ ಅಧಿಕಾರ ಹೈಕೋರ್ಟ್ ಇಲ್ಲ. ಹೀಗಾಗಿ ಕೂಡಲೇ ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
 
 
ಈ ಮೊದಲು ನೈನಿತಾಲ್ ಹೈಕೋರ್ಟ್ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ವಜಾಗೊಳಿಸಿತ್ತು. ಏಪ್ರಿಲ್ 29ರಂದು ವಿಧಾನಸಭೆಯಲ್ಲಿ ವಿಶ್ವಾಸಮತಯಾಚಿಸುವಂತೆ ನಿರ್ಗಮಿತ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸೂಚಿಸಿತ್ತು. ಆದರೆ ಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ಮತ್ತೆ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿದೆ.

LEAVE A REPLY

Please enter your comment!
Please enter your name here