1000ರೂ. ನೋಟು ಬರಲ್ವಂತೆ..!

0
251

ರಾಷ್ಟ್ರೀಯ ಪ್ರತಿನಿಧಿ ವರದಿ
1000ರೂ. ನೋಟುಗಳನ್ನು ಬಿಡುಗಡೆ ಮಾಡುವ ಪ್ರಶ್ನೆಯಿಲ್ಲ ಎಂದು ಕೇಂದ್ರ ಹಣಕಾಸು ವ್ಯವಹಾರ ಇಲಾಖೆಯ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಸ್ಪಷ್ಟಪಡಿಸಿದ್ದಾರೆ.
 
ದೆಹಲಿಯಲ್ಲಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ 500, 100 ರೂ.ಮೌಲ್ಯದ ನೋಟುಗಳನ್ನು ಪೂರೈಸಲಾಗುವುದು ಎಂದು ದಾಸ್ 1000ರೂ. ವಿಷಯದಲ್ಲಿ ಯೂ ಟರ್ನ್ ತೆಗೆದುಕೊಂಡಿದ್ದಾರೆ.
 
 
ದಾಸ್ ಅವರು ನ.10ರಂದು 1000ರೂ. ನೋಟು ಬಿಡುಗಡೆ ಎಂದಿದ್ದರು. ಹೊಸ ವಿನ್ಯಾಸದಲ್ಲಿ ನೋಟು ಬಿಡುಗಡೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು.
 
 
 
ಎಟಿಎಂಗಳಲ್ಲಿ ಹೊಣಕೊರತೆಯಾಗದಂತೆ ನೋಡಿಕೊಳ್ಳುತ್ತೇವೆ.ಜನರು ಅಗತ್ಯಕ್ಕಿಂತ ಹೆಚ್ಚು ಹಣ ಡ್ರಾ ಮಾಡಬಾರದು ಎಂದು ಶಕ್ತಿಕಾಂತ್ ದಾಸ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here