109ನೇ ವಸಂತಕ್ಕೆ ಕಾಲಿಟ್ಟ ನಡೆದಾಡುವ ದೇವರು

0
522

ತುಮಕೂರು ಪ್ರತಿನಿಧಿ ವರದಿ
ನಡೆದಾಡುವ ದೇವರು ಎಂದು ಪ್ರಸಿದ್ಧಿ ಪಡೆದಿರುವ ಪದ್ಮವಿಭೂಷಣ ಡಾ. ಶ್ರೀ ಶಿವಕುಮಾರಸ್ವಾಮೀಜಿ ಅವರು ಇಂದು 109ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಶ್ರೀಗಳ ಜನ್ಮ ದಿನದ ಹಿನ್ನೆಲೆಯಲ್ಲು ಮಠದ ಆವರಣದಲ್ಲಿ ಹಬ್ಬದ ವಾತಾವರಣ ಮೂಡಿದೆ.
ಈ ಹಿನ್ನಲೆಯಲ್ಲಿ ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಸ್ವಾಮೀಜಿ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಅನೇಕ ಭಕ್ತಾದಿಗಳು ಸಿದ್ಧಗಂಗಾ ಮಠಕ್ಕೆ ತೆರಳಿ, ಸ್ವಾಮೀಜಿ ಅವರ ಆರ್ಶೀವಾದಿ ಪಡೆಯುತ್ತಿದ್ದಾರೆ.
ಸಚಿವ ಸಂಪುಟದ ಸಹದ್ಯೋಗಿಗಳೊಂದಿಗೆ ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಮೀಜಿ ಅವರಿಗೆ ಶುಭ ಕೋರಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಮಠಕ್ಕೆ ಆಗಮಿಸಿ ಸ್ವಾಮೀಜಿ ಶುಭಾಶಯ ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಶ್ರೀಗಳ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ವಾಮೀಜಿಗಳು ಎಂದಿನಂತೆ ಭಕ್ತಾದಿಗಳನ್ನು ಬೆಳಿಗ್ಗೆ 8.30ರಿಂದಲೇ ಭೇಟಿಯಾಗುತ್ತಿದ್ದಾರೆ.

LEAVE A REPLY

Please enter your comment!
Please enter your name here