2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶ

0
236

ರಾಷ್ಟ್ರೀಯ ಪ್ರತಿನಿಧಿ ವರದಿ
ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.
 
 
ಫೆಬ್ರವರಿ 7 ರ ತನಕ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕರ್ನಾಟಕಕ್ಕೆ ಇಂದು ಸೂಚಿಸಿದೆ. ಇದರಿಂದ ಕರ್ನಾಟಕಕ್ಕೆ ನಿರಾಳತೆ ಸಿಕ್ಕಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಂಕಟದಿಂದ ಸದ್ಯಕ್ಕೆ ಬಚಾವಾಗಿದೆ.
 
 
ಮುಂದಿನ ವಿಚಾರಣೆ ತನಕ(ಫೆಬ್ರವರಿ 7, 2017) ಮಧ್ಯಂತರ ಆದೇಶ ಜಾರಿಯಲ್ಲಿರಲಿದ್ದು, ಪ್ರತಿನಿತ್ಯ ತಮಿಳುನಾಡಿಗೆ 2,000 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here