4 ಉಗ್ರರ ಹತ್ಯೆ-ಓರ್ವ ಸೆರೆ

0
180

 
ರಾಷ್ಟ್ರೀಯ ಪ್ರತಿನಿಧಿ ವರದಿ
ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪ ನೌಗಾಮ್ ಸೆಕ್ಟರ್ ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.
 
 
 
ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕನನ್ನು ಯೋಧರು ಸೆರೆಹಿಡಿದಿದ್ದಾರೆ.
 
 
 
ಒಬ್ಬ ಉಗ್ರಗಾಮಿಯನ್ನು ಬಂಧಿಸಿರುವುದರಿಂದ ಆತನಿಂದ ಕೆಲವು ಮಹತ್ವದ ಮಾಹಿತಿಗಳು ಸಿಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here