61 ಕನ್ನಡ ರಾಜ್ಯೋತ್ಸವ ಸಂಭ್ರಮ

0
128

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ ಮುಗಿಲುಮುಟ್ಟಿದೆ.ಸಿಲಿಕಾನ್ ಸಿಟಿಯಲ್ಲೂ ಕನ್ನಡ ಹಬ್ಬದ ಕಲರವ ಎದ್ದು ಕಾಣುತ್ತಿದೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ಹಬ್ಬ ಆಚರಣೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಿಎಂಗೆ ಸಂಪುಟ ಸಹೋದ್ಯೋಗಿಗಳು ಸಾಥ್ ನೀಡಲಿದ್ದಾರೆ. ಧ್ವಜಾರೋಹಣದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
 
ವಿಶೇಷ ಪೂಜೆ
ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಜಿಲ್ಲಾಧಿಕಾರಿ ಡಿ.ರಂಗದೀಪ್ ಸೇರಿ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಕನ್ನಡಾಂಬೆ ಭುವನೇಶ್ವರಿ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here