66ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ

0
247

ರಾಷ್ಟ್ರೀಯ ಪ್ರತಿನಿಧಿ ವರದಿ
ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವಾಗಿದ್ದು, ಮೋದಿ 66ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಗುಜರಾತ್‌ ಪ್ರವಾಸದಲ್ಲಿರುವ ಮೋದಿ, ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಾಯಿಯನ್ನು ಭೇಟಿಯಾಗುವ ಮೂಲಕ ತಮ್ಮ ಹುಟ್ಟುಹಬ್ಬದ ದಿನವನ್ನು ಆರಂಭಿಸಿದರು.
 
 
ಶನಿವಾರ ಬೆಳಗ್ಗೆ ಗುಜರಾತ್‌ನ ರಾಜಭವನದಿಂದ ನರೇಂದ್ರ ಮೋದಿ ಅವರು ಗಾಂಧಿನಗರದಲ್ಲಿರುವ ಮನೆಗೆ ಭೇಟಿ ನೀಡಿ ತಾಯಿ ಹೀರಾಬೆನ್ ಅವರ ಆಶೀರ್ವಾದ ಪಡೆದರು. ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು, ನಂತರ ಮನೆಯಿಂದ ಹೊರಬಂದು ಸುತ್ತಮುತ್ತಲಿನ ಜನರತ್ತ ಕೈ ಬೀಸಿದರು.
 
 
 
ನರೇಂದ್ರ ಮೋದಿ ಅವರು ನವಸಾರಿ ಜಿಲ್ಲೆಯ ಬುಡಕಟ್ಟು ಅಂಗವಿಕಲ ಮಕ್ಕಳೊಂದಿಗೆ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ಬುಡಕಟ್ಟು ಜಿಲ್ಲೆಯಾದ ದಾಹೋದ್‌ಗೆ ತೆರಳಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here