883ನೇ ಬಸವ ಜಯಂತಿ

0
614

 
ಬೆಂಗಳೂರು ಪ್ರತಿನಿಧಿ ವರದಿ
ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ
ಜಗಜ್ಯೋತಿ  ಬಸವೇಶ್ವರರ 883ನೇ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿರುವ ಅಶ್ವಾರೂಢ ಬಸವೇಶ್ವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದ್ದಾರೆ.
 
 
 
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಕೆಪಿಸಿಸಿ ಅಧ್ಯಕ್ಷ-ಗೃಹ ಸಚಿವ ಡಾ. ಜಿ ಪರಮೇಶ್ವರ್, ಬಿಬಿಎಂಪಿ ಮೇಯರ್ ಬಿ ಎಸ್ ಮಂಜುನಾಥರೆಡ್ಡಿ, ಬೇಲಿ ಮಠದ ಶಿರುದ್ರಶ್ರೀ, ವೀರಶೈವ ಮುಖಂಡ ತಿಪ್ಪಣ್ಣ, ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಉಪಸ್ಥಿತರಿದ್ದರು.
 
 
ಬಸವಣ್ಣನವರ ಬಗ್ಗೆ ಒಂದಿಷ್ಟು…
ವೈಶಾಖ ಶುದ್ಧ ತದಿಗೆಯಂದು, ಲಿಂಗಾಯತ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.
 
 
 
ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ.

LEAVE A REPLY

Please enter your comment!
Please enter your name here